ಕುಂದಾಪುರ : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅವಶ್ಯಕತೆಯಿದೆ. ಈ ದೃಷ್ಟಿಯಿಂದ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗರೂಕರಾಗುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಮಾದಕ ವ್ಯಸನಗಳಿಂದ ಮುಕ್ತರಾಗಬೇಕು, ಜೊತೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ಆಗುವ ವಂಚನೆಗಳಿAದ ಜಾಗರೂಕರಾಗಿರಬೇಕು ಎಂದು ಉಡುಪಿ ಡಾ| ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ಸೌಜನ್ಯ ಶೆಟ್ಟಿ ತಿಳಿಸಿದರು.
ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ದೈಹಿಕ ಮತ್ತು ಮಾನಸಿಕ ಆರೋಗ್ಯ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ವಿನಯಾ ವಿ. ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಶ್ರೀಮತಿ ಜೋಸ್ಲಿನ್ ರೆನಿಟಾ ಅಲ್ಮೇಡಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.