ಹೊಸದಿಲ್ಲಿ : ಕೋಲ್ಕತಾದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ, ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ, ಪಶ್ಚಿಮ ಬಂಗಾಳ ಪೊಲೀಸರಿಗೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್, ವೈದ್ಯರನ್ನು ರಕ್ಷಣೆ ಮಾಡುವ ಎಲ್ಲಾ ವ್ಯವಸ್ಥೆ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಘಟನೆ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಪ್ರಕರಣದ ಕುರಿತಾಗಿ ಆ.22ರ ಒಳಗಾಗಿ ವಸ್ತುಸ್ಥಿತಿ ವರದಿ ನೀಡುವಂತೆ ಸಿ ಬಿ ಐಗೆ ಸೂಚಿಸಿದೆ. ಮಾತ್ರವಲ್ಲದೇ ತಕ್ಷಣವೇ ಡಿಜಿಪಿಯನ್ನು ಹುದ್ದೆಯಿಂದ ತೆರವು ಮಾಡಿ ಮತ್ತು ವಿಧ್ವಂಸಕರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸಿ ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ ನೀಡಿದೆ