ಬೆಂಗಳೂರು : ತಮ್ಮ ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಅವರ ಪುತ್ರ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ದೃಢಪ ಟ್ಟಿದೆ ಎಂದು ಜನಪ್ರತಿನಿಧಿ ಗಳ ವಿಶೇಷ ನ್ಯಾಯಾ ಲಯಕ್ಕೆ ಶುಕ್ರವಾರ ಸಲ್ಲಿಸಿದ ಆರೋಪಪಟ್ಟಿ ಯಲ್ಲಿ ವಿಶೇಷ ತನಿಖಾ ತಂಡ ಉಲ್ಲೇಖಿಸಿದೆ.
ಅಲ್ಲದೆ ಹಲವು ಮಹಿಳಯರಿಗೆ ಲೈಂಗಿಕ ಕಿರುಕುಳ ನೀಡಿ ಪ್ರಜ್ವಲ್ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದರು ಎಂದು ಎಸ್ಐಟಿ ಹೇಳಿದೆ. ಇದರೊಂದಿಗೆ ಹಾಸನ ಪೆನ್ ಡ್ರೈವ್ ಹಗರಣ ಬಯಲಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರಜ್ವಲ್ ರೇವಣ್ಣರವರಿಂದ ಹಲವು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿದ್ದಾರೆ ಎಂದು ಎಸ್ಐಟಿ ಹೇಳಿದೆ