ಕೋಟ : ಇಲ್ಲಿನ ಕೋಟ ವಿವೇಕ ಪದವಿಪೂರ್ವ ಕಾಲೇಜಿನ 2024- 25ನೇ ಶೈಕ್ಷಣಿಕ ವರ್ಷದ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಮೊದಲಿಗೆ ಸಣ್ಣ ಸಣ್ಣ ಹನಿಗವನಗಳನ್ನು ಹಾಗೂ ಕಥೆಗಳನ್ನು ಓದುವುದು ಅಭ್ಯಾಸ ಮಾಡಿಕೊಳ್ಳಬೇಕು. ಹೀಗೆ ಹಂತ ಹಂತವಾಗಿ ಓದಿನೊಂದಿಗೆ ಬರಹವನ್ನು ರೂಡಿ ಮಾಡಿಕೊಂಡಲ್ಲಿ ಮುಂದೊಂದು ದಿನ ಉತ್ತಮ ಸಾಹಿತಿಯಾಗಲು ಸಾಧ್ಯ ಎಂದು ತಿಳಿಸಿದರು,ಈ ವಿಷಯದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಕಣ್ಣನ್ನು ಸದಾ ತೆರೆದಿಟ್ಟುಕೊಳ್ಳಬೇಕೆಂದು ವಿವರಿಸಿದರು.ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.ವಿದ್ಯಾರ್ಥಿನಿ ಕುಮಾರಿ ಉನ್ನತಿ ಕಾರ್ಯಕ್ರಮ ನಿರೂಪಿಸಿ, ಸಾಹಿತ್ಯ ಸಂಘದ ಸಂಚಾಲಕ ಚಂದ್ರಶೇಖರ್ ಎಚ್.ಎಸ್ ವಂದಿಸಿದರು.