Home » ಡಿಸೆಂಬರ್‌ನಲ್ಲಿ ಸಂಪುಟ ಪುನಾರಚನೆ
 

ಡಿಸೆಂಬರ್‌ನಲ್ಲಿ ಸಂಪುಟ ಪುನಾರಚನೆ

by Kundapur Xpress
Spread the love

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಶುಕ್ರವಾರ: ಹೈಕಮಾಂಡ್ ಜತೆಗೆ ನಡೆದ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ, ಪೂರ್ವನಿಗದಿಯಂತೆ ಸಂಪುಟ ಪುನಾರಚನೆಯು ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂಬ ವದಂತಿ ಹರಡಿತ್ತು

ಈ ಬಗ್ಗೆ ಕಾಂಗ್ರೆಸ್ ಉನ್ನತ ಮೂಲಗಳು ಸ್ಪಷ್ಟನೆ ನೀಡಿದ್ದು, ಕಳೆದ ಬಾರಿ ಎಐಸಿಸಿ ಜತೆಗಿನ ಸಭೆಯಲ್ಲಿಯೇ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಾಗಿತ್ತು. ಈ ವೇಳೆ ಡಿಸೆಂಬರ್‌ನಲ್ಲಿ ಸಂಪುಟ ಪುನರ್ ರಚನೆ ಬಗ್ಗೆ ತೀರ್ಮಾನಿಸ ಲಾಗಿದೆ. ಹೀಗಾಗಿ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ವರಿಷ್ಠ ರೊಂದಿಗೆ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ

   

Related Articles

error: Content is protected !!