ಬೆಂಗಳೂರು : ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದ್ದಾರೆ.
ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಪಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿರುವ ಸ್ವಾಮೀಜಿಗಳು, ಈ ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಪ್ರಕಟಿಸಿದ್ದಾರೆ. ಇದರೊಂದಿಗೆ ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರ ಪರವಾಗಿ ಹೋರಾಟ ಮಾಡುವವರ ಸಾಲಿಗೆ ಮಠಾಧೀಶರ ಪ್ರವೇಶವೂ ಆದಂತಾಗಿದೆ.