ಕಾರ್ಕಳ : ಅಯ್ಯಪ್ಪನಗರದ ಯುವತಿ ಮೇಲೆ ಅತ್ಯಾಚಾರ ಗೈದ ಆರೋಪಿಗಳಿಗೆ ನ್ಯಾಯಾಲಯವು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಂಧಿತ ಆರೋಪಿಗಳಾದ ಅಲ್ತಾಫ್ ಹಾಗೂ ರಿಚಾರ್ಡ್ನನ್ನು ಪೊಲೀಸರು ಕೋರ್ಟ್ ಮುಂದೆ ಹಾಜರು ಪಡಿಸಿದ್ದು ನ್ಯಾಯಾಲಯವು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ವಿವಿಧ ಆಯಾಮಗಳಲ್ಲಿ ಆರೋಪಿಗಳ ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ಮಾಹಿತಿ ನೀಡಿದ್ದಾರೆ.