ಬೆಂಗಳೂರು : ಡಿಜಿಟಲ್ ಮಾಧ್ಯಮದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಜಾಹೀರಾತು ನೀಡುವ ಸಂಬಂಧ ಸರ್ಕಾರದಿಂದ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮಗಳಿಗೆ ನೀಡುತ್ತಿದ್ದ ಸರ್ಕಾರಿ ಜಾಹೀರಾತುಗಳು ಇನ್ನು ಮುಂದೆ ಡಿಜಿಟಲ್ ಮಾಧ್ಯಮಗಳಿಗೆ ಲಭ್ಯವಾಗಲಿದೆ. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳ ಮಾನದಂಡಗಳನ್ನು ಪೂರೈಸುವ ಡಿಜಿಟಲ್ ಮಾಧ್ಯಮಗಳಿಗೆ ಸರ್ಕಾರಿ ಜಾಹೀರಾತು ಲಭ್ಯವಾಗಲಿದೆ.
ಸಾಂಪ್ರದಾಯಿಕ ಜಾಹೀರಾತುಗಳಿಗಿಂತ, ಡಿಜಿಟಲ್ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ಧಿಷ್ಟಜನರನ್ನು ತಲುಪಲಿದೆ. ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಇಂಟರ್ನೆಟ್ ಬಳಸುವ ಜನರಿಗೆ ತಲುಪಿಸಲು ಈ ಮೂಲಕ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿಯನ್ನು ತಕ್ಷಣದಿಂದ ಜಾರಿಗೊಳಿಸಲಾಗುವುದು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ