ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎ1 ಆರೋಪಿ ಪವಿತ್ರ ಗೌಡ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಪ್ರಕರಣ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾಗೌಡ ಅವರ ನ್ಯಾಯಾಂಗ ಬಂಧನ ಕುರಿತಂತೆ ಅರ್ಜಿಯನ್ನು ವಿಚಾರಣೆ ನಡೆಸಿತು.ಜಾಮೀನು ಅರ್ಜಿಯ ವಿಚಾರಣೆಯ ನಡುವೆಯೂ ಕೋರ್ಟ್ ಸೆಪ್ಟೆಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ.