ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದುಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯು ಗುರುವಾರ ಹೈಕೋರ್ಟ್ ನಲ್ಲಿವಿಚಾರಣೆಗೆ ಬರಲಿದ್ದು,ಇಡೀ ರಾಜ್ಯದ ಗಮನ ಹೈಕೋರ್ಟ್ ಕಲಾಪದ ಮೇಲಿದೆ.
ಈ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯದಲ್ಲಿದೆ. ಹೈಕೋ ರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠವು ಗುರುವಾರವೇ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸುತ್ತದೆಯೇ ಅಥವಾ ವಾದ-ಪ್ರತಿ ವಾದ ಪೂರ್ಣಗೊಳ್ಳದೆ ಅರ್ಜಿ ವಿಚಾರಣೆ ಮುಂದೂಡಿಕೆ ಕಾಣುತ್ತದೆಯೇ ಎಂಬ ಕುತೂಹಲ ಮೂಡಿದೆ