ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಗುರುವಾರ ಪ್ರಕಟಿಸಲಿದೆ. ಅರ್ಜಿಗಳ ಕುರಿತು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿಸಿರುವ ತೀರ್ಪನ್ನು ಹಿರಿಯ ನ್ಯಾಯ ಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರನ್ನು ಒಳಗೊಂಡಿರುವ ವಿಭಾಗೀಯ ಪೀಠ ಇಂದು ಗುರುವಾರ ಸಂಜೆ 4.30ಕ್ಕೆ ಪ್ರಕಟಿಸಲಿದೆ.