ಬೆಂಗಳೂರು : ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೇರೆಡೆಗೆ ನಟ ದರ್ಶನ್ ಹಾಗೂ ಅವರ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆಗೆ ತಾಂತ್ರಿಕ ತೊಡಕು ಎದುರಾಗಿದೆ. ಈ ಕಾರಣಕ್ಕೆ ದರ್ಶನ್ ಅವರ ಜೈಲು ಸ್ಥಳಾಂತರ ಬುಧವಾರ ವಿಳಂಬವಾಗಿದ್ದು, ಅವರನ್ನು ಗುರುವಾರ ಮಧ್ಯಾಹ್ನ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸಾಗಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ. ರಾಜಾತಿಥ್ಯ ಪ್ರಕರಣ ಹಿನ್ನೆಲೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ಹಾಗೂ ಅವರ 9 ಮಂದಿ ಆಪ್ತರನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ನ್ಯಾಯಾಲಯದ ಅನುಮತಿಯನ್ನು ಕಾರಾಗೃಹ ಅಧಿಕಾರಿಗಳು ಪಡೆದಿದ್ದಾರೆ. ನ್ಯಾಯಾಂಗ ಬಂಧನವನ್ನು ಸೆ. 9 ರವರೆಗೆ ವಿಸ್ತರಿಸಲಾಗಿದೆ