ಕಾರ್ಕಳ : ಕಾರ್ಕಳದಲ್ಲಿ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಪೂರೈಕೆ ಮಾಡಿದ ಆರೋಪದಲ್ಲಿ ಹಿಂದೂ ಕಾರ್ಯಕರ್ತ ಅಭಯ್ ಬಂಧನದ ಕುರಿತು ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ಸಮಾಜ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೃತ್ಯ ಯಾರೇ ಎಸಗಿರಲಿ, ಆತ ಅಭಯ್ ಅಥವಾ ಅಹಮ್ಮದ್ ಆಗಿರಲಿ. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ವಿರುದ್ಧದ ಯಾವುದೇ ಹೋರಾಟಕ್ಕೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಸಹಕಾರ ನೀಡುತ್ತೇವೆ. ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಮಾಡೋದು ವಿಶ್ವ ಹಿಂದೂ ಪರಿಷತ್- ಬಜರಂಗದಳದ ಉದ್ದೇಶವೂ ಆಗಿದೆ. ಕಾರ್ಕಳ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ಸ್ ಸರಬರಾಜು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆದರೆ ಇದನ್ನೇ ಮುಂದಿಟ್ಟು ಅತ್ಯಾಚಾರ ಪ್ರಕರಣವನ್ನು ತಿರುಚುವ ಪ್ರಯತ್ನ ಮಾಡಬಾರದು. ಒಂದು ವೇಳೆ ಪ್ರಕರಣ ತಿರುಚುವ ಪ್ರಯತ್ನ ಮಾಡಿದರೆ ಸಂಘಟನೆ ಸುಮ್ಮನಿರಲ್ಲ ಎಂದರು.