ಮಂಗಳೂರು : ಇನ್ನುಮುಂದೆ ಪ್ರತಿ ತಿಂಗಳು ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ರೆಸ್ಟೋರೆಂಟ್, ಹೋಟೆಲ್ ಮತ್ತು ಇತರ ಆಹಾರ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಯನ್ನು ಸಾರ್ವಜನಿಕರ ಮುಂದೆ ಇಡಲಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಹೋಟೆಲ್, ರೆಸ್ಟೋ ರೆಂಟ್, ಆಹಾರ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಈಗಾಗಲೇ ಆಹಾರ ಸುರಕ್ಷತಾ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಆರಂಭಿಕ ಹಂತವಾಗಿ ಎರಡು ದಿನಗಳ ಕಾಲ ವಿಶೇಷ ಜಾಗೃತಿ ಆಂದೋಲನ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ತಯಾರಿಕಾ ಘಟಕಗಳು ಕಾಳಜಿ ವಹಿಸಬೇಕು. ನಿರ್ಲಕ್ಷ್ಯ ವಹಿಸುವವರ ವಿರುದ್ದ ಇಲಾಖೆ ಸೂಕ್ತ ಕ್ರಮ ಜರುಗಿಸಲಿದೆ ಎಂದರು ತಿಳಿಸಿದರು.