ಬೆಂಗಳೂರು : ತಮಿಳುನಾಡು ಹಿಸ್ಟ್-ಉತ್ – ತಹೀರ್ ಪ್ರಕರಣದ ಶಂಕಿತ ಉಗ್ರನನ್ನು ಬೆಂಗಳೂರು ನಗರದಲ್ಲಿ ಕಾರ್ಯಾಚರಣೆ ಕೈಗೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಜೀಜ್ ಅಹಮದ್ ಅಲಿಯಾಸ್ ಜಲೀಲ್ ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರನಾಗಿದ್ದಾನೆ. ಶಂಕಿತ ಉಗ್ರ ಆ.30ರಂದು ಶುಕ್ರವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಏರ್ ಲೈನ್ಸ್ ವಿಮಾನದಲ್ಲಿ ಸೌದಿ ಅರೇಬಿಯಾದ ಜಿದ್ದಾಗೆ ಪರಾರಿಯಾಗಲು ಸಂಚು ರೂಪಿಸಿದ್ದ ಎನ್ನಲಾಗಿದೆ.
ಸೌದಿ ಏರ್ ಲೈನ್ಸ್ ವಿಮಾನ 11.45ಕ್ಕೆ ಹೊರಡುವುದಿತ್ತು ವಿಮಾನ ಹೊರಡುವ ಕೆಲವೇ ಕ್ಷಣಗಳ ಮೊದಲು ಎನ್‌ಐಎ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ. ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಶಂಕಿತ ಉಗ್ರನನ್ನು ಬಂಧಿ ಸಿದ್ದಾರೆ. ಈತ ತಮಿಳುನಾಡಿನ ಹಿಜ್ಜೆ-ಉತ್-ತಹೀರ್ ಪ್ರಕರಣದ ಪ್ರಮುಖ ಆರೋಪಿ ಎಂದು ಎನ್‌ಐಎ ಮಾಹಿತಿ ನೀಡಿದ್ದು, ಶಂಕಿತ ಉಗ್ರ ಮತ್ತು ಆತನ ಪತ್ನಿ ಇಬ್ಬರೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಎನ್‌ಐಎ ಅಧಿಕಾರಿಗಳು ಶಂಕಿತನನ್ನು ವಶಕ್ಕೆ ಪಡೆಯುತ್ತಿದ್ದಂತೆ ಆತನ ಪತ್ನಿ, ತನ್ನ ಪತಿ ಕಾಣೆಯಾಗಿದ್ದಾರೆ ಎಂದು ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ದೂರು ನೀಡಿ, ಅಪರಿಚಿತ ವ್ಯಕ್ತಿಗಳು ತನ್ನ ಪತಿಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ದೂರಿದ್ದಾಳೆ