Home » ಕಾಂಗ್ರೆಸ್‌ ರಾಜಭವನ ಚಲೋಗೆ ಬಿಜೆಪಿ ಆಕ್ರೋಶ
 

ಕಾಂಗ್ರೆಸ್‌ ರಾಜಭವನ ಚಲೋಗೆ ಬಿಜೆಪಿ ಆಕ್ರೋಶ

by Kundapur Xpress
Spread the love

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಬೀದಿಗಿಳಿದು ಧರಣಿ ನಡೆಸಿರುವುದನ್ನು ಗಮನಿಸಿದರೆ ಆಡಳಿತದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದು ಸಾಬೀತಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಭವನವನ್ನು ಬಿಜೆಪಿ ಕಚೇರಿ ಎಂದು ಟೀಕಿಸಲಾಗಿದೆ. ಹಾಗಾದರೆ ವಿಧಾನ ಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ. ಸರ್ಕಾರವು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ ಎಂದು ಕಿಡಿಕಾರಿದರು.

ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಕಾಂಗ್ರೆಸ್ಸಿಗರು ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನವು ಸಂವಿಧಾನದತ್ತ ಅಧಿಕಾರವುಳ್ಳದಾಗಿದೆ. ಕಾಂಗ್ರೆಸ್ಸಿಗರು ಮನಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ. ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್ ಕಚೇರಿಯಾಗಿತ್ತೇ? ಕಾಂಗ್ರೆಸ್ ನಾಯಕರು ಕಿವಿಯ ಹೂವು ಇಡುವುದನ್ನು ಬಿಟ್ಟು ನ್ಯಾಯಲಯದಲ್ಲಿ ಪ್ರಶ್ನಿಸಲಿ ಎಂದು ಟೀಕಾ ಪ್ರಹಾರ ನಡೆಸಿದರು

   

Related Articles

error: Content is protected !!