Home » ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟನೆ
 

ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟನೆ

19ನೇ ಕನ್ನಡ ಸಾಹಿತ್ಯ ಸಮ್ಮೇಳ

by Kundapur Xpress
Spread the love

ಕುಂದಾಪುರ : ಬಿದ್ಕಲ್‌ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ ( ಪ್ರೌಢಶಾಲಾ ) ಆವರಣದಲ್ಲಿ ಶನಿವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರ ತಾಲ್ಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಉದ್ಘಾಟಿಸಿದರು

ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದ ಅಧ್ಯಕ್ಷರಾದ ಎಂ.ಬಾಲಕೃಷ್ಣ ಶೆಟ್ಟಿ, ಎಂ.ಮಹೇಶ್ ಶೆಟ್ಟಿ ಮೊಳಹಳ್ಳಿ, ಅರುಣ್‌ಕುಮಾರ ಹೆಗ್ಡೆ , ಎಂ.ಚಂದ್ರಶೇಖರ ಶೆಟ್ಟಿ, ದೀಪಾ ಶೆಟ್ಟಿ, ಜಯಂತಿ, ವಿಘ್ನೇಶ್ವರ ಭಟ್, ಕರುಣಾಕರ ಶೆಟ್ಟಿ ಮುಂತಾದವರಿದ್ದರು

ತಾಲ್ಲೂಕು ಕಸಾಪ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಸ್ವಾಗತಿಸಿದರು, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನರೇಂದ್ರ ಕುಮಾರ್ ಕೋಟ ಪದ್ಯ ರೂಪದಲ್ಲಿ ಡಾ.ಮೋಹನ್ ಆಳ್ವಾ ಅವರನ್ನು ಪರಿಚಯಿಸಿದರು. ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ವಂದಿಸಿದರು. ಶಿಕ್ಷಕ ಉದಯ್‌ಕುಮಾರ ಶೆಟ್ಟಿ ನಿರೂಪಿಸಿದರು

ಸಭಾ ಕಾರ್ಯಕ್ರಮದ ಬಳಿಕ ಮೂಡುಬಿದಿರೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ಜೀವನ್‌ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ಸಾಹಿತಿ ವೈದೇಹಿ ಅವರು ಬರೆದಿರುವ ನಾಟಕ ‘ ನಾಯಿ ಕಥೆ ‘ ಪ್ರಸ್ತುತಿಗೊಂಡಿತು

   

Related Articles

error: Content is protected !!