ಕಾಪು : ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಕಾಪು ತಾಲೂಕು ಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾಕಿ ಹೇಮಾವತಿ ವೀ.ಹೆಗ್ಗಡೆ ಇವರ ಕೃಪಾಶೀರ್ವಾದಗಳೊಂದಿಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿರುವ 2024-25ನೇ ಸಾಲಿನ “ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಕಾಪು ಮಹಾದೇವಿ ಪೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮನ್ನು ಉದ್ಘಾಟಿಸಿ ಸಾಂಕೇತಿಕವಾಗಿ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜುರಾತಿ ಪತ್ರವನ್ನು ವಿತರಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಕಾಪು ಪುರಸಭೆಯ ಸದಸ್ಯರಾದ ಅನಿಲ್ ಕುಮಾರ್, ಕಾಪು ಮಹಾದೇವಿ ಪೌಢಶಾಲೆಯ ಮುಖ್ಯೋಪಾಧ್ಯಾಯರಾದ ಜ್ಯೋತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಬಬಿತಾ ಅರಸ್, ಸಮಾಜ ಸೇವಕರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪತ್ರಕರ್ತರಾದ ಪುಂಡಲೀಕ ಮರಾಠೆ, ಶ್ರೀ ಕ್ಷೇ.ಧ.ಗ್ರಾ.ಯೋ ಉಡುಪಿ ಜಿಲ್ಲಾ ನಿರ್ದೇಶಕರಾದ ನಾಗರಾಜ ಶೆಟ್ಟಿ, ಕಾಪು ತಾಲೂಕು ಯೋಜನಾಧಿಕಾರಿಗಳಾದ ಮಮತಾ ಹಾಗೂ ಕಾಪು ತಾಲೂಕಿನ ಮೆಲ್ವೀಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.