Home » ರಾಜ್ಯದಲ್ಲೆ ಮಾದರಿ ಹಸಿರು ಕ್ರಾಂತಿ ಯೋಜನೆ
 

ರಾಜ್ಯದಲ್ಲೆ ಮಾದರಿ ಹಸಿರು ಕ್ರಾಂತಿ ಯೋಜನೆ

ಗಣಪತಿ ಟಿ ಶ್ರೀಯಾನ್

by Kundapur Xpress
Spread the love

ಕೋಟ: ಸಂಘ ಸಂಸ್ಥೆಗಳನ್ನು ಕಟ್ಟುವುದು ಸಲಭ ಆದರೆ ಅದನ್ನು ಮುನ್ನಡೆಸುವ ಕಾರ್ಯ ಕ್ಲಿಷ್ಡಕರ ಈ ದಿಸೆಯಲ್ಲಿ ಕೋಟ ಪಂಚವರ್ಣ ಸಂಸ್ಥೆ ನಿರಂತರ ಸಾಮಾಜಿಕ ಕಾರ್ಯ ಅತ್ಯಂತ ಪ್ರಶಂಸನೀಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗಣಪತಿ ಟಿ ಶ್ರೀಯಾನ್ ಹೇಳಿದರು.ಭಾನುವಾರ ತೆಕ್ಕಟ್ಟೆ ಬಾರಾಳಿಬೆಟ್ಟು ಪರಿಸರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ ,ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ,ಸಮುದ್ಯತಾ ಗ್ರೂಪ್ಸ್ ಕೋಟ,ಎಸ್‍ಸಿಐ ಕೋಟ ಲಿಜನ್ ಸಹಯೋಗದೊಂದಿಗೆ ತೆಕ್ಕಟ್ಟೆ ಗ್ರಾಮಪಂಚಾಯತ್ ಎಸ್ ಎಲ್ ಆರ್ ಎಂ ಘಟಕದ ಸಂಯೋಜನೆಯೊಂದಿಗೆಮೂರು ತಿಂಗಳ ಕಾಲ ನಡೆದ 222 ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಸಮಾರೋಪದಲ್ಲಿ ಮಾತನಾಡಿ ಪಂಚವರ್ಣ ಸಂಸ್ಥೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ ಪರಿಸರಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನೀಡಿ ಸ್ವಸ್ಥ್ಯ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆಯುತ್ತಿದೆ ಇಂಥಹ ಸಂಘಟನೆಗಳು ಎಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿದ್ದರೆ ಆ ಗ್ರಾಮಗಳು ಸುಭಿಕ್ಷೆಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದರು.ತೆಕ್ಕಟ್ಟೆ ಗ್ರಾಮಪಂಚಾಯತ್ ಅಧ್ಯಕ್ಷೆ ಶೋಭನಾ ಗಿಡ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಇದೇ ವೇಳೆ ತೆಕ್ಕಟ್ಟೆ ಪಂಚಾಯತ್ ವಿವಿಧ ಭಾಗಗಳ ಮನೆಗಳಿಗೆ ತೆರಳಿ ಗಿಡ ನೆಟ್ಟುಜಾಗೃತಿ ಮೆರೆಯಲಾಯಿತು.ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.ಮುಖ್ಯ ಅಭ್ಯಾಗತರಾಗಿ ತೆಕ್ಕಟ್ಟೆ ಗ್ರಾಮಪಂಚಾಯತ್ ಎಸ್‍ಎಲ್‍ಆರ್‍ಎಂ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಸುಗುಣ,ಕೆನರಾ ಬ್ಯಾಂಕ್ ಸಿಬ್ಬಂದಿ ರಾಮ ದೇವಡಿಗ, ಧಾರ್ಮಿಕ ಚಿಂತಕ ರಾಮ ಪೂಜಾರಿ,ಕುಂದಾಪುರ ಅಂಚೆ ಕಛೇರಿಯ ಅಂಚೆ ಸಹಾಯಕ ಸುರೇಶ್ ದೇವಾಡಿಗ ,ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷ ಕಲಾವತಿ ಅಶೋಕ್ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ.ಎಂ.ಬಾಯರಿ ಸ್ವಾಗತಿಸಿ ನಿರೂಪಿಸಿದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು

   

Related Articles

error: Content is protected !!