ಕೋಟ : ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರ ನಡುವಿನ ಬಾಂಧವ್ಯವನ್ನು ವೃದ್ಧಿಗೊಳಿಸಲು ಪೋಷಕರ ಸಭೆಯು ಉತ್ತಮ ವೇದಿಕೆ. ಈ ಸಭೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಪೋಷಕರು ತಮ್ಮ ಮಕ್ಕಳನ್ನು ಚೆನ್ನಾಗಿ ಅರಿತುಕೊಳ್ಳಬಹುದು ಎಂದು ಮಣೂರು ಪಡುಕರೆಯ ಗೀತಾನಂದ ಟ್ರಸ್ಟ್ನ ಪ್ರವರ್ತಕ ಆನಂದ ಸಿ ಕುಂದರ್ ಪೋಷಕರಿಗೆ ಕಿವಿಮಾತು ಹೇಳಿದರು. ಮಣೂರು ಪಡುಕರೆಯ ಸರಕಾರಿ ಪದವಿಪೂರ್ವ ಕಾಲೇಜಿನ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ಕಾಲೇಜಿನ 25 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ನ ವತಿಯಿಂದ ವಿದ್ಯಾರ್ಥಿ ವೇತನವನ್ನು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಗುರುತು ಪತ್ರಗಳನ್ನು ವಿತರಿಸಿದರು. ಕಾಲೇಜಿಗೆ ವರ್ಗಾವಣೆಗೊಂಡು ಆಗಮಿಸಿದ ಉಪನ್ಯಾಸಕರಾದ ಕಿಶೋರ್ ಹಂದೆ, ಡಾ. ಸಹನಾ ಎಸ್. ಮತ್ತು ಮಮತಾ ಸುವರ್ಣ ಇವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ನಿರ್ಗಮಿತ ಅತಿಥಿ ಉಪನ್ಯಾಸಕರನ್ನು ಗೀತಾನಂದ ಫೌಂಡೇಶನ್ ವತಿಯಿಂದ ಗೌರವಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಡೆನ್ನಿಸ್ ಬಾಂಜಿ ಕೆ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಲ.ಸೋ.ಬ.ಸ.ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಸುನೀತಾ, ಕಾಲೇಜು ಶೈಕ್ಷಣಿಕ ಸಮಿತಿಯ ಸದಸ್ಯರಾದ ನಾಗೇಶ್ ಶಾನುಭಾಗ್, ರಮೇಶ್ ಕುಂದರ್, ಜಯರಾಮ ಶೆಟ್ಟಿ, ಗುಲಾಬಿ ಬಂಗೇರ, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮದಾಸ್ ನಾಯಕ್, ಗೀತಾನಂಧ ಫೌಂಡೇಶನ್ನ ಸಮಾಜ ಕಾರ್ಯ ವಿಭಾಗದ ಸಂಯೋಜಕ ರವಿಕಿರಣ್ ಕೋಟ ಹಾಗೂ ದೀಕ್ಷಿತಾ ಉಪಸ್ಥಿತರಿದ್ದರು.ಉಪನ್ಯಾಸಕ ಸತ್ಯನಾರಾಯಣ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಅಕ್ಷತಾ ವಂದಿಸಿದರು.