Home » ಚಾಮುಂಡಿಬೆಟ್ಟಕ್ಕೆ ಸಿಎಂ ಭೇಟಿ, ವಿಶೇಷ ಪೂಜೆ
 

ಚಾಮುಂಡಿಬೆಟ್ಟಕ್ಕೆ ಸಿಎಂ ಭೇಟಿ, ವಿಶೇಷ ಪೂಜೆ

by Kundapur Xpress
Spread the love

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿದ ಬಳಿಕ ಹೈಕೋರ್ಟ್‌ನಲ್ಲಿ ತಾವು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು

ಮುಡಾ ಹಗರಣ ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ನಡೆದ ಜನಾಂದೋಲನ ಸಮಾವೇಶದ ನಂತರ ಶ್ರಾವಣ ಶನಿವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದ್ದರು. ಅದಾಗಿ ತಿಂಗಳ ಒಳಗಾಗಿ ಮತ್ತೊಂದು ಬಾರಿ ಮತ್ತೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ದೇವಿಗೆ ಪೂಜೆ ಸಲ್ಲಿಸಿರುವುದು ವಿಶೇಷ.

   

Related Articles

error: Content is protected !!