Home » 31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ ವಿತರಣೆ
 

31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ ವಿತರಣೆ

by Kundapur Xpress
Spread the love

ಕಾಪು : ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮದಡಿ 31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ ಕಾಪು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ವತಿಯಿಂದ ಮಂಜೂರಾದ ಉಚಿತ ಹೋಲಿಗೆ ಯಂತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪುರಸಭೆಯ ಸಭಾಂಗಣದಲ್ಲಿ ವಿತರಿಸಿದರು.ಕಾಪು ತಾಲೂಕು ವ್ಯಾಪ್ತಿಯ 31 ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕಾಪು ತಾಲೂಕು ಆಡಳಿತಾಧಿಕಾರಿಗಳಾದ ಪೂರ್ಣಿಮಾ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ವ್ಯವಸ್ಥಾಪಕರಾದ ಮಂಜುನಾಥ್ ಉಪಸ್ಥಿತರಿದ್ದರು.

   

Related Articles

error: Content is protected !!