ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ಸುರಕ್ಷತಾ ದೃಷ್ಟಿಯಿಂದ ಸಿ.ಸಿ ಕ್ಯಾಮರಾ ಅಳವಡಿಕೆ ಬಗ್ಗೆ ಬೀಚ್ ಸಂಪರ್ಕ ರಸ್ತೆ ಅಭಿವೃದ್ಧಿಗೊಳಿಸುವ ಬಗ್ಗೆ ಮತ್ತು ಬೀಜ್ ನಲ್ಲಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆ ಆರಂಭಿಸುವ ಬಗ್ಗೆ ಮತ್ತು ಬೀಚ್ ಉತ್ಸವ ಹಾಗೂ ಫುಡ್ ಫೆಸ್ಟಿವಲ್ ಆಚರಿಸುವ ಕುರಿತು ಜೊತೆಗೆ ಬೀಚ್ ನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷರಾದ ಮನೋಹರ್ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹೇಮಚಂದ್ರ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.