ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳದ ಜವುಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 27.97 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಲವು ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದ್ದು ಸಿದ್ದರಾಮಯ್ಯ ಅವರು ಮುತುವರ್ಜಿ ವಹಿಸಿ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಕೃತಜ್ಞತೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವಳಿ ಪಾರ್ಕನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಪಿಪಿಒ ಮಾದರಿಯಲ್ಲಿ 729.97 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಿಎಂ ಅನುಮೋದನೆ ನೀಡಿದ್ದಾರೆ.ಇದೇ ಸಂದರ್ಭದಲ್ಲಿ ಜೈವಿಕ ತಂತ್ರಜ್ಞಾನದ ಉದಯೋನ್ಮುಖ ಕ್ಷೇತ್ರಗಳಿಗೆ ಆದ್ಯತೆ ನೀಡುವ ‘ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ – 2024’ಕ್ಕೆ ಒಪ್ಪಿಗೆ ದೊರೆತಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳಿಗೆ ಹೆಚ್ಚಿಸಲು, ಒಂದು ಬಾರಿಯ ಕ್ರಮವಾಗಿ ಒಂದು ವರ್ಷದ ಅವಧಿಗೆ ಸಡಿಲಿಸಲು ನಿರ್ಧಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ಶಾಲೆ- ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು 718.54 ಕೋಟಿ ವೆಚ್ಚದಲ್ಲಿ ಒದಗಿಸಲು ಆಡಳಿತಾತ್ಮಕ ಅನುಮೋದನೆ ಕೂಡಾ ದೊರೆತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ