Home » ಖ್ಯಾತ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಮೈಸೂರು ಅವರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ
 

ಖ್ಯಾತ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಮೈಸೂರು ಅವರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

by Kundapur Xpress
Spread the love

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟದ ಸಹಭಾಗಿತ್ವದಲ್ಲಿ ಕಳೆದ ಹತ್ತೊಂಭತ್ತು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ.
ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ಶ್ರೀ ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಶ್ರೀಪ್ರಕಾಶ್ ರೈ, ಶ್ರೀಪಡ್ರೆ, ಶ್ರೀಮತಿ ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ , ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್, ಡಾ.ವಿದ್ಯಾಭೂಷಣ್ ಅವರಿಗೆ ಪ್ರದಾನ ಮಾಡಲಾಗಿರುತ್ತದೆ.
ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2024ರ ಸಾಲಿನಲ್ಲಿ ಖ್ಯಾತ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಮೈಸೂರು ಅವರನ್ನು ಆಯ್ಕೆ ಮಾಡಲಾಗಿದೆ.ಹಲವು ದಶಕಗಳಿಂದ ಯುವ ಜನಾಂಗಕ್ಕೆ ಪ್ರೇರಣಾತ್ಮಕ ಮಾತುಗಳಿಂದ ಭರವಸೆ ತುಂಬಿ ಹೊಸದೆಸೆಯ ಬೆಳಕಾಗಿರುವ, ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತು ಚೌಕಟ್ಟು ನೀಡಿದ ಅಮೂಲ್ಯ ಸೇವೆಯನ್ನು ಹಾಗೂ ಅವರು ಏರಿದ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಈ ವರ್ಷ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   

Related Articles

error: Content is protected !!