Home » ಬಿಜೆಪಿ ನಾಯಕರಿಗೆ ಆರ್‌ ಎಸ್‌ ಎಸ್‌ ಕ್ಲಾಸ್
 

ಬಿಜೆಪಿ ನಾಯಕರಿಗೆ ಆರ್‌ ಎಸ್‌ ಎಸ್‌ ಕ್ಲಾಸ್

ಪಕ್ಷದ ಬೆಳವಣಿಗೆ ನಮಗೆ ಸಮಾಧಾನ ತರುತ್ತಿಲ್ಲ, ನೀವೂ ಕಾಂಗ್ರೇಸ್‌ ರೀತಿ ಆದರೆ ಹೇಗೆ

by Kundapur Xpress
Spread the love

 ಬೆಂಗಳೂರು : ರಾಜ್ಯ ಬಿಜೆಪಿಯ ನಾಯಕರು ಕೂಡ ಕಾಂಗ್ರೆಸ್ ಪಕ್ಷದಂತೆ ನಡೆದುಕೊಂಡರೆ ಹೇಗೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತೀಕ್ಷ್ಯವಾಗಿ ಪ್ರಶ್ನಿಸಿದೆ. ಬಹುದಿನಗಳ ನಂತರ ಬಿಜೆಪಿಯ ಆಯ್ದ ಸುಮಾರು 40 ಮಂದಿ ನಾಯಕರೊಂದಿಗೆ ಸುದೀರ್ಘ ಸಭೆ ನಡೆಸಿದ ಆರ್‌ಎಸ್‌ಎಸ್ ಮುಖಂಡರು ಕಿವಿಹಿಂಡುವ ಕೆಲಸ ಮಾಡಿದ್ದಾರೆ.

ಗುರುವಾರ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಸುಮಾರು 5 ಗಂಟೆಗಳ ಕಾಲ ಸದಾಶಿವ ನಗರದ ರಾಷ್ಟೋತ್ಥಾನ ಪರಿಷತ್ತಿನ ಕಚೇರಿಯಲ್ಲಿ ಸಭೆ ನಡೆಸಿದ ಆರ್‌ಎಸ್‌ಎಸ್ ಮುಖಂಡರು ಎಲ್ಲ ನಾಯಕರ ಮುಕ್ತ ಅಭಿಪ್ರಾಯ, ಅನಿಸಿಕೆಗಳನ್ನು ಆಲಿಸಿದ ನಂತರ ಸಾತ್ವಿಕವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿಯಲ್ಲಿನ ಬೆಳವಣಿಗೆಗಳು ನಮಗೆ ಸಮಾಧಾನ ತರುತ್ತಿಲ್ಲ, ಹೀಗಾಗಿಯೇ ತುಸು ದೂರ ಉಳಿದುಕೊಂಡಿದ್ದೇವು ಆದರೆ, ಈಗ ಪರಿಸ್ಥಿತಿ ಬಿಗಡಾಯಿಸುತ್ತಿರುವುದರಿಂದ ಪಕ್ಷದ ಭವಿಷ್ಯದ ದೃಷ್ಟಿಯಿಂದ ಇವತ್ತು ಸಭೆ ಕರೆದಿದ್ದೇವೆ. ಸಂಘ ಯಾವತ್ತಿಗೂ ಪಕ್ಷದ ಮಾರ್ಗದರ್ಶನಕ್ಕೆ ಸಿದ್ಧವಿರುತ್ತದೆ ಎಂದು ಸಂಘದ ಮುಖಂಡರು ಹೇಳಿದ್ದಾರೆ ಎನ್ನಲಾಗಿದೆ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಂಘದ ಪ್ರಮುಖರಾದ ಮುಕುಂದ್, ಸುಧೀರ್, ಬಿಜೆಪಿ ರಾಜ್ಯ ಉಸ್ತುವಾರಿ ಡಾ. ‘ರಾಧಾಮೋಹನ್ ದಾಸ್ ಅಗರ್‌ವಾಲ್  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತತರು ಸೇರಿದಂತೆ ಬಿಜೆಪಿಯ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ರೀತಿ ಅಲ್ಲ ಎಂಬ ಕಾರಣಕ್ಕಾಗಿ, ಹಿಂದುತ್ವದ ಸಿದ್ಧಾಂತಕ್ಕಾಗಿ ಸಂಘವು ಬಿಜೆಪಿಯನ್ನು ಬೆಂಬಲಿಸುತ್ತಿದೆ. ಸಂಘದ ಅಪೇಕ್ಷೆಯಂತೆ ನೀವು ಶೇ.50ರಷ್ಟೂ ಇಲ್ಲದಿದ್ದರೆ ಹೇಗೆ ಎಂದು ತೀಕ್ಷ್ಮವಾಗಿ ಪ್ರಶ್ನಿಸಿದ್ದಾರೆ.

ಪಕ್ಷದ ನಾಯಕರು ತತ್ವ-ಸಿದ್ಧಾಂತಗಳನ್ನು ಬದಿಗೊತ್ತಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಪರಸ್ಪರ ಮುಕ್ತವಾಗಿ ಮಾತನಾಡುವುದನ್ನು ಬಿಟ್ಟು ಮಾಧ್ಯಮಗಳ ಮೂಲಕ ಮಾತನಾಡುವುದು ಸರಿಯಲ್ಲ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು ಎಂದು ಮೂಲಗಳು ತಿಳಿಸಿದೆ

   

Related Articles

error: Content is protected !!