Home » ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಹಲವರ ದೂರು
 

ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಹಲವರ ದೂರು

by Kundapur Xpress
Spread the love

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಲ್ಲರನ್ನೂ ವಿಶ್ವಾಸದಿಂದ ಕರೆದೊಯ್ಯುತ್ತಿಲ್ಲ ಎಂದು ಹಲವು ನಾಯಕರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರ ಎದುರು ಅಸಮಾಧಾನ ಹೊರಹಾಕಿದ್ದಾರೆ. ಗುರುವಾರ ನಡೆದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಹಲವು ನಾಯಕರ ಪೈಕಿ ಕೆಲವರು ನೇರವಾಗಿ, ಇನ್ನು ಹಲವರು ಪರೋಕ್ಷವಾಗಿ ವಿಜಯೇಂದ್ರ ಅವರ ಕಾರ್ಯವೈಖರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿರುವ ಬಸನ ಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಪ್ರತಾಪ್ ಸಿಂಹ ಸೇರಿದಂತೆ ತಟಸ್ಥ ನಿಲುವು ತಳೆದ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ವಿಜಯೇಂದ್ರ ಅವರಿಗೆ ಅನುಭವ ಸಾಲದು. ಅವರು ಪಕ್ಷದ ಅನುಭವಿ ನಾಯಕರ ಮಾರ್ಗದರ್ಶನ ಪಡೆಯಬೇಕು. ಆದರೆ, ಅದು ಆಗುತ್ತಿಲ್ಲ. ಕೆಲವೇ ಕೆಲವು ಮುಖಂಡರನ್ನು ತಮ್ಮೊಂದಿಗೆ ಇಟ್ಟುಕೊಂಡು ಸಾಗುತ್ತಿದ್ದಾರೆ. ಪಕ್ಷದ ಪ್ರಮುಖ ತೀರ್ಮಾನಗಳನ್ನು ಆ ಕೆಲವು ಮುಖಂಡರೊಂದಿಗೆ  ಕೈಗೊಳ್ಳುತ್ತಾರೆ. ಪರಿಣಾಮ ಹಿರಿಯ ನಾಯಕರಿದ್ದರೂ ಜವಾಬ್ದಾರಿಯಿಲ್ಲದಂತೆ ಇರಬೇಕಾಗಿದೆ ಎಂದು ಅಳಲು ತೋಡಿಕೊಂಡರು ಎನ್ನಲಾಗಿದೆ

   

Related Articles

error: Content is protected !!