ಉಡುಪಿ : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತ ವೈಫಲ್ಯ,ಹಗರಣಗಳ ಸರಮಾಲೆ,ಒಲೈಕೆ ರಾಜಕಾರಣ ಹಾಗೂ ಪ್ರಸಕ್ತ ಅನಪೇಕ್ಷಿತ ವಿದ್ಯಮಾನಗಳ ಕುರಿತು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಅವರ ಪತ್ರಿಕಾ ಗೋಷ್ಠಿಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಉಡುಪಿ ಜಿಲ್ಲಾ ವಕ್ತಾರರಾದ ಗೀತಾಂಜಲಿ ಎಮ್. ಸುವರ್ಣ, ಸತೀಶ್ ಶೆಟ್ಟಿ ಮುಟ್ಲುಪಾಡಿ, ವಿಜಯಕುಮಾರ್ ಉದ್ಯಾವರ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.