ಬೆಂಗಳೂರು : ರೈತರ ಅನೂಕೂಲಕ್ಕಾಗಿ ಹಾಲಿನ ದರ ಹೆಚ್ಚಳ ಬಗ್ಗೆ ಶುಕ್ರವಾರ ಮಾಗಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಮಾಗಡಿಯಲ್ಲಿ 70 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ವಿಚಾರವಾಗಿ ಎಲ್ಲಾ ಒಕ್ಕೂಟದ ಅಧ್ಯಕ್ಷರನ್ನು ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡಿ ಆ ಹಣವನ್ನು ನೇರವಾಗಿ ಉತ್ಪಾದಕರಿಗೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಹಾಲಿನ ದರ ಹೆಚ್ಚಳ ವಿಚಾರವಾಗಿ ಎಲ್ಲಾ ಒಕ್ಕೂಟಗಳ ಅಧ್ಯಕ್ಷರ ಸಭೆ ನಡೆಸಿ ದರ ಏರಿಕೆ ಮಾಡೋಣ ಎಂದು ಸಚಿವ ರಾಜಣ್ಣ ಅವರನ್ನು ಕರೆದು ಸೂಚಿಸಿದ ಅವರು, ಹಾಲಿನ ದರದ ಜತೆಗೆ ಕಾರ್ಯದರ್ಶಿಗಳಿಗೆ ಪ್ರತಿ ಲೀಟರ್ ಹಾಲಿಗೆ 20 ಪೈಸೆ ಗೌರವ ಧನ ನೀಡಲಾಗುವುದು ಎಂದರು.