ಬೆಂಗಳೂರು : ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ಗಾಂಧಿ ನಾಯಕರಲ್ಲ, ಅವರೊಬ್ಬ ಅಪ್ರಬುದ್ಧ ವ್ಯಕ್ತಿ. ಅವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷವು ದಲಿತ ವಿರೋಧಿ ಮತ್ತು ಮೀಸಲಾತಿ ವಿರೋಧಿ ಎಂಬುದು ಸಾಬೀತಾಗಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಮೀಸಲಾತಿ ವಿರೋಧಿಯಾಗಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ, ರಾಜೀವ್ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ. ಅವರ ಕುಟುಂಬವು ಮೀಸಲಾತಿ ವಿರೋಧಿ ಪರಂಪರೆಯನ್ನು ಹೊಂದಿದೆ ಎಂದು ಟೀಕಿಸಿದರು.