ಬೆಂಗಳೂರು : ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ 30 ಲಕ್ಷ ರೂ. ಕಮಿಷನ್ ನೀಡುವಂತೆ ಒತ್ತಾಯಿಸಿ ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಈ ಪ್ರಕರಣ ದಾಖಲಾದ ಬೆನ್ನಲ್ಲೇ ಬಂಧನ ಭೀತಿಯಿಂದ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಕೋಲಾರ ಸಮೀಪ ಶಾಸಕರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ.
ಶಾಸಕ ಮುನಿರತ್ನ ತಮಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜ್ ಹಾಗೂ ಜಾತಿ ನಿಂದನೆ ಮಾಡಿರುವುದಾಗಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ದೂರು ನೀಡಿದ್ದರು
ಈ ದೂರುಗಳನ್ನಾಧರಿಸಿ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು, ದೂರುದಾರರನ್ನು ಶಾಸಕರ ಗೃಹ ಕಚೇರಿಗೆ ಕರೆದೊಯ್ದು ಮಹಜರ್ ನಡೆಸಿದರು. ಅಷ್ಟರಲ್ಲಿ ನಗರ ತೊರೆದಿದ್ದ ಶಾಸಕರ ಬೆನ್ನುಹತ್ತಿದ್ದ ಪೊಲೀಸರು, ಕೊನೆಗೆ ಕೋಲಾರ ಜಿಲ್ಲೆ ನಂಗಲಿ ಸಮೀಪ ‘ಸ್ಥಳೀಯ ಪೊಲೀಸರ ಸಹಕಾರದಲ್ಲಿ ಬಂಧಿಸಿದ್ದಾರೆ