ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಹಲವಾರು ವರ್ಷಗಳ ಕಾಲ ತಲೆಮರೆಸಿಕೊಂಡ 24ಕ್ಕೂ ಅಧಿಕ ಆರೋಪಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರು ಪಡೆಸಲಾಗಿದೆ ಎಂದು ಉಡುಪಿ S.P ಅಕ್ಷಯ್ ಹಾಕೆ ತಿಳಿಸಿದ್ದಾರೆ.
ತಲೆಮರೆಸಿಕೊಂಡ ಆರೋಪಿಗಳ ಪೈಕಿ ದರೋಡೆ, ಸರಕಾರಿ ನೌಕರರ ಮೇಲೆ ಹಲ್ಲೆ ,ಕಳವು, ಅಪಹರಣ ,ಅತ್ಯಾಚಾರ ,ರಸ್ತೆ ಅಫಘಾತ ಚೆಕ್ ಅಮಾನ್ಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಆರೋಪಿಗಳ ಪೈಕಿ ಕೆಲವರು 10-13 ವರ್ಷಗಳಿಂದ ತಲೆಮರೆಸಿಕೊಂಡಿರುತ್ತಾರೆ.