ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕಿ ಅತಿಶಿ ಅವರು ಮಂಗಳವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇದರೊಂದಿಗೆ, ಶೀಲಾ ದೀಕ್ಷಿತ್ ಹಾಗೂ ಸುಷ್ಮಾ ಸ್ವರಾಜ್ ಬಳಿಕ ದೆಹಲಿಯು ಮೂರನೇ ಮಹಿಳಾ ಮುಖ್ಯಮಂತ್ರಿಯನ್ನು ಕಾಣುವಂತಾಗಿದೆ
ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಅತಿಶಿ ಹೆಸರನ್ನು ಸೂಚಿಸಿದರು. ಎಲ್ಲರೂ ಅನುಮೋದಿಸಿದರು. ಅತಿಶಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಸಂಜೆ ಕೇಜ್ರವಾಲ್ ಅವರು ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
ಆತಿಶಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಯನ್ನು ರಾಜ್ಯಪಾಲರಿಗೆ ನೀಡಿದರು. ಇದರ ಬೆನ್ನಲ್ಲೇ ಆತಿಶಿ ನೇತೃತ್ವದಲ್ಲಿ ಉಪರಾಜ್ಯಪಾಲರನ್ನು ಭೇಟಿಯಾದ ಆಪ್ ನಿಯೋಗ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿತು.