ಬ್ರಹ್ಮಾವರ : ಬ್ರಹ್ಮಾವರ ತಾಲೂಕು ವಂಡಾರು ಗ್ರಾಮದ ನಿವಾಸಿ ಸತೀಶ್ (33) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರ ಕಟ್ಟಿಂಗ್ ಕೆಲಸ ಮಾಡಿಕೊಂಡಿದ್ದ ಇವರು ಸೋಮವಾರ ಕೆಲಸಕ್ಕೆ ಹೋಗಿದ್ದು ಮಧ್ಯಾಹ್ನ ಮನೆಗೆ ಬಂದು ಬೆನ್ನುನೋವು ಇರುವುದರಿಂದ ಮನೆಯಲ್ಲೇ ಇದ್ದರು. ಇವರ ತಾಯಿ ಹಸುವಿಗೆ ಹುಲ್ಲು ತರಲೆಂದು ಹೋಗಿ ದ್ದರು. ವಾಪಸ್ ಬರುವಾಗ ಸತೀಶ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿದ್ದು ಕೂಡಲೆ ಕೆಳಗಳಿಸಿ ಚಿಕಿತ್ಸೆಯ ಬಗ್ಗೆ ಬ್ರಹ್ಮಾವರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.