Home » ಒಂದು ದೇಶ ಒಂದು ಚುನಾವಣೆ
 

ಒಂದು ದೇಶ ಒಂದು ಚುನಾವಣೆ

ಸಂಪುಟ ಅನುಮೋದನೆ

by Kundapur Xpress
Spread the love

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂದು ದೇಶ, ಒಂದು ಚುನಾವಣೆ ನಡೆಸಲು ತೀರ್ಮಾನಿಸಿದ್ದು, ಕೇಂದ್ರ ಸಚಿವ ಸಂಪುಟ ಸಭೆ ಇದಕ್ಕೆ ಅನುಮೋದನೆ ನೀಡಿದೆ.

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನು ಕೇಂದ್ರ ಸಂಪುಟ ಸಭೆ ಮುಂದೆ ತರಲಾಗಿದ್ದು ಇದಕ್ಕೆ ಒಪ್ಪಿಗೆ ನೀಡಲಾಗಿದೆ. ದೇಶಾದ್ಯಂತ ಈ ಸಂಬಂಧ ಚರ್ಚೆ ನಡೆಸಿ 2029ರ ವೇಳೆಗೆ ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ಸಮಯ ಮತ್ತು ವೆಚ್ಚದ ಉಳಿತಾಯವಾಗಲಿದೆ.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತದ ವ್ಯವಸ್ಥೆಯಲ್ಲಿರುವ ಹಲವಾರು ಅಡೆತಡೆಗಳನ್ನು ಕಡಿಮೆ ಮಾಡಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ಈ ಸಂಬಂಧ ಮಸೂದೆ ಮಂಡಿಸಿ ಅಂಗೀಕಾರ ಪಡೆಯಲಿದೆ ಎಂದು ಮೂಲಗಳು ಹೇಳಿವೆ.

   

Related Articles

error: Content is protected !!