Home » ಬಿ. ಬಿ. ಹೆಗ್ಡೆ ಕಾಲೇಜು : ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆ ಉದ್ಘಾಟನೆ
 

ಬಿ. ಬಿ. ಹೆಗ್ಡೆ ಕಾಲೇಜು : ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆ ಉದ್ಘಾಟನೆ

by Kundapur Xpress
Spread the love

ಕುಂದಾಪುರ : ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸುವ ಮಹತ್ವದ ಸಂಸ್ಥೆ ಎನ್.ಎಸ್.ಎಸ್. ಈ ಘಟಕಗಳ ಮೂಲಕ ನಡೆಯುವ ವಿವಿಧ ಕ್ರಿಯಾ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಸಕ್ರಿಯವಾಗಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸತ್ಪ್ರಜೆಗಳಾಗಲು ಸಾಧ್ಯ.ನಾಯಕತ್ವ ಗುಣಗಳೊಂದಿಗೆ ಬದುಕಿನ ಶಿಕ್ಷಣವನ್ನು ವಿದ್ಯಾರ್ಥಿಗಳು ಈ ಮೂಲಕ ಪಡೆದುಕೊಳ್ಳಬೇಕೆಂದು ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀಮತಿ ಸುಗುಣಾ ಆರ್. ಕೆ. ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಎನ್.ಎಸ್.ಎಸ್. ಘಟಕ 1 & 2ರ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನ ಕೌಶಲ್ಯಗಳನ್ನು ರೂಪಿಸಿಕೊಳ್ಳಲು ಎನ್.ಎಸ್.ಎಸ್. ಅತ್ಯುತ್ತಮ ವೇದಿಕೆ ಎಂದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು.

   

Related Articles

error: Content is protected !!