Home » ಜಾಮೀನಿಗೆ ದರ್ಶನ್ ಅರ್ಜಿ
 

ಜಾಮೀನಿಗೆ ದರ್ಶನ್ ಅರ್ಜಿ

ಬಂಧನಕ್ಕೊಳಗಾದ 103 ದಿನಗಳ ಬಳಿಕ

by Kundapur Xpress
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ  ಸಲ್ಲಿಸಿದ್ದಾರೆ. ದರ್ಶನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನೋಟಿಸ್ ನೀಡಿದ ನ್ಯಾಯಾಲಯ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ. ದರ್ಶನ್ ಪರ ವಕೀಲ ಎಸ್.ಸುನೀಲ್ ಕುಮಾರ್ ಅವರು ಜಾಮೀನು ಅರ್ಜಿ ಸಲ್ಲಿಸಿದರು. ನ್ಯಾ|ಜಯಶಂಕರ್ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಿ ಸೆ.23ಕ್ಕೆ ವಿಚಾರಣೆ ಮುಂದೂಡಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 3991 ಪುಟಗಳ ಚಾರ್ಜ್‌ಶೀಟ್ ಸೆ. 4ರಂದು 24ನೇ ಎಸಿಎಂಎಂ ಕೋರ್ಟಿಗೆ ಸಲ್ಲಿಸಿದ 18 ದಿನ ಬಳಿಕ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

   

Related Articles

error: Content is protected !!