ಬೆಂಗಳೂರು : ಸಂಡೂರು ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟು ಜೆಡಿಎಸ್ ಬಳಿ ಚನ್ನಪಟ್ಟಣ ಕ್ಷೇತ್ರವನ್ನು ಕೇಳಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ್ದು ಶಿಗ್ಗಾವಿಯಿಂದ ಎಂದಿನಂತೆ ಬಿಜೆಪಿ ಅಭ್ಯರ್ಥಿಯನ್ನೇ ಸ್ಪರ್ಧೆಗಿಳಿಸುವ ಕುರಿತು ಸಮಾಲೋಚನೆ ನಡೆದಿದೆ.
ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಪ್ರಬಲ ಆಕಾಂಕ್ಷಿಯಾಗಿದ್ದು ಈಗಾಗಲೇ ಕೇಂದ್ರ ನಾಯಕರನ್ನೂ ಭೇಟಿ ಮಾಡಿದ್ದು ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಇನ್ನಿತರರ ನಾಯಕರು ಇದನ್ನು ಮನವರಿಕೆ ಮಾಡಿಕೊಟ್ಟಿದ್ದರು. ಸೋಮವಾರ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರ ಪ್ರತಿಧ್ವನಿಸಿದ್ದು ಸಂಡೂರನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟು ಚನ್ನಪಟ್ಟಣವನ್ನು ಕೇಳಲು ಕೇಂದ್ರ ನಾಯಕರನ್ನು ಮುಂದಿನ ದಿನಗಳಲ್ಲಿ ಮನವೊಲಿಸಿ, ಮಿತ್ರಪಕ್ಷವಾ ಗಿರುವ ಜೆಡಿಎಸ್ ಜತೆಗೂ ಮಾತುಕತೆ ನಡೆಸಲು ಚರ್ಚೆಯಾಗಿದೆ ಎಂದು ಮೂಲಗಳು ಹೇಳಿವೆ.