ಹರ್ಯಾಣ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂಬ ವಿಷಯದ ಬಗ್ಗೆ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಬೇರೂರಿದೆ ಎಂದು ಆರೋಪಿಸಿದ್ದಾರೆ. ಹರ್ಯಾಣದ ಸೋನಿಪತ್ ನಲ್ಲಿ ಬಿಜೆಪಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ವೈಫಲ್ಯಗಳ ಬಗ್ಗೆ ಮಾತನಾಡುತ್ತಲೇ ಸಿದ್ದರಾಮಯ್ಯ ಅವರನ್ನು ಒಳಗೊಂಡಿರುವ ಮುಡಾ ಹಗರಣದತ್ತ ಗಮನ ಸೆಳೆದರು. ‘ಕರ್ನಾಟಕ ಸರ್ಕಾರ ಬಂದು ಕೇವಲ 2 ವರ್ಷಗಳು ಕಳೆದಿವೆ. ಅಲ್ಲಿನ ಕಾಂಗ್ರೆಸ್ ಸರ್ಕಾರವನ್ನು ನೋಡಿ. ಮುಖ್ಯಮಂತ್ರಿ ಭೂ ಹಗರಣದ ಆರೋಪ ಎದುರಿಸುತ್ತಿದ್ದಾರೆ. ತನಿಖೆ ಪ್ರಶ್ನಿಸಿ ಅವರು ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಸೂಕ್ತ ತನಿಖೆ ಅಗತ್ಯ ಎಂದು ಕೋರ್ಟ್ ಹೇಳಿದೆ’ ಎಂದು ಮೋದಿ ನುಡಿದರು.