ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾ ಗಿದ್ದು, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸು ವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಈ ಮೂಲಕ ಸಿದ್ದ ರಾಮಯ್ಯ ಅವರಿಗೆ ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ತನಿಖೆಯ ಸಂಕಷ್ಟ ಎದುರಾದಂತಾಗಿದೆ. ಪ್ರಕರಣ ಸಂಬಂಧ ಅಭಿಯೋಜನೆಗೆ ಮತ್ತು ತನಿಖೆಗೆ ನೀಡಿದ ರಾಜ್ಯಪಾಲರ ಕ್ರಮವನ್ನು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಹಿಂದೆ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ಪ್ರಕಟಿಸಿದರು. ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ ಅವರು, ಮೂರು ತಿಂಗಳೊಳಗೆ ಅಂದರೆ, ಡಿ.24ರೊಳಗಾಗಿ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.