ಕುಂದಾಪುರ : ಬೈಂದೂರಿನ ಮಾಜಿ ಶಾಸಕ ಹಾಗೂ ರಾಮಕ್ಷತ್ರಿಯ ಸಮಾಜದ ಹಿರಿಯ ಮುಖಂಡರಾದ ಕೆ.ಲಕ್ಷ್ಮೀನಾರಾಯಣ ರವರು ಇಂದು ಬೆಳಿಗ್ಗೆ 8.00 ಗಂಟೆಯ ಸುಮಾರಿಗೆ ನಿಧನ ಹೊಂದಿದರು ಅವರಿಗೆ 85 ವರ್ಷ ವಯಸ್ಸಾಗಿತ್ತು
ಬೈಂದೂರು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಗೆದ್ದು ಶಾಸಕರಾಗಿ ಆಯ್ಕೆಯಾಗಿ ಬೈಂದೂರಿನ ಸಮಗ್ರ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು
ರಾಮಕ್ಷತ್ರಿಯ ಸಮಾಜದ ಹಿರಿಯ ಮುಖಂಡರಾಗಿದ್ದ ಲಕ್ಷ್ಮೀನಾರಾಯಣರವರು ಸಮಾಜದ ಸರ್ವತೋಮುಖ ಅಭಿವೃದ್ದಿಗಾಗಿ ಬಹಳಷ್ಟು ಶ್ರಮಿಸಿದ್ದು ವಿಶ್ವ ರಾಮಕ್ಷತ್ರಿಯರ ಸಂಘದ ಅಧ್ಯಕ್ಷರಾಗಿ ಪ್ರಸ್ತುತ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು
ಕುಂದಾಪುರದ ಶ್ರೀರಾಮ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸ್ಥಾಪನೆಯಲ್ಲಿ ಬಹಳಷ್ಟು ಶ್ರಮ ವಹಿಸಿದ್ದರು ಅವರು ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ