Home » ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ : ಸಿದ್ದರಾಮಯ್ಯ
 

ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ : ಸಿದ್ದರಾಮಯ್ಯ

ಕೇಂದ್ರದಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ

by Kundapur Xpress
Spread the love

ಮೈಸೂರು : ಮುಡಾ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ, ರಾಜೀನಾಮೆ ಕೊಡಲ್ಲ. ಕಾನೂನು ಹೋರಾಟ ಮಾಡ್ತೀನಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನನಗಿರುವ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು ಎಂದು ಪ್ರತಿಪಾದಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂವಿಧಾನದ ಮುಖ್ಯಸ್ಥರಾದ ರಾಜ್ಯಪಾ ಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲದೇಶದಲ್ಲಿ ಎಲ್ಲೆಲ್ಲಿ ವಿರೋಧ ಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿದರು. ರಾಷ್ಟ್ರಪತಿಗಳಾಗಲಿ, ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದೇ ಚುನಾವಣೆಯ ಮೂಲಕ  ಆಯ್ಕೆಯಾದವರಲ್ಲ ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ, ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದರು.

   

Related Articles

error: Content is protected !!