ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಲಕ್ಷ್ಮೀನಾರಾಯಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ರವರು ಪಡೆದರು
.ಬೈಂದೂರಿನಲ್ಲಿ ಬಿಜೆಪಿ ಸಂಘಟನೆ ಕಟ್ಟಿ ಬೆಳೆಸುವಲ್ಲಿ ಶ್ರಮಿಸಿ, ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿ ಪ್ರಾಮಾಣಿಕ ಹಾಗೂ ಸಜ್ಜನ ವ್ಯಕ್ತಿತ್ವಕ್ಕೆ ಹೆಸರಾಗಿದ್ದ ಮಾನ್ಯ ಲಕ್ಷ್ಮಿನಾರಾಯಣ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹಾರೈಸಿದರು