ಉಡುಪಿ : ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ರಾಜಾಂಗಣದವರೆಗೆ ‘ಬೃಹತ್ ಜನಜಾಗೃತಿ ಜಾಥಾ’ ಹಾಗೂ 11.00 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ‘ಬೃಹತ್ ಜನಜಾಗೃತಿ ಸಮಾವೇಶ’ ನಡೆಯಲಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು.
ಅವರು ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ನಡೆಯುತ್ತಿರುವ ಸಮಾಜಮುಖಿ ಸೇವಾ ಚಟುವಟಿಕೆಗಳು ಹಾಗೂ ಗಾಂಧಿ ಜಯಂತಿ ಕಾರ್ಯಕ್ರಮದ ಕುರಿತು ವಿಸ್ತೃತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್(ರಿ.) ಇದರ ಕರಾವಳಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ನವೀನ್ ಅಮೀನ್, ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್ ಆತ್ರಾಡಿ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಯೋಜನೆಯ ತಾಲೂಕು ಯೋಜನಾಧಿಕಾರಿ ರಾಮ ಎಮ್., ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.