ಬೆಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ. ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ನ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ.
ಈ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಗಾಗಿ ರಾಜ್ಯದಿಂದ ನಾಲ್ಕಾರು ಹೆಸರುಗಳನ್ನು ಶಿಫಾರಸು ಮಾಡಲಾ ಗಿತ್ತು. ಕಿಶೋರ್ ಕುಮಾರ್ ಪುತ್ತೂರು ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಹ ಆದೇಶದಲ್ಲಿ ತಿಳಿಸಿದ್ದಾರೆ.