ಹೆಮ್ಮಾಡಿ : ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ರೋನಿತ್ ಪೂಜಾರಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.