Home » ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ
 

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ

by Kundapur Xpress
Spread the love

ಬೆಳಗಾವಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ)ನ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ಅವರು ರಾಜೀನಾಮೆ ನೀಡಿದ್ದಾರೆ. ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗೆ  ರಾಜೀನಾಮ ಪತ್ರವನ್ನು ಸಲ್ಲಿಸಿರುವ ರಮೇಶ್, ತಾವು ಸ್ವ-ಇಚ್ಛೆಯಿಂದಲೇ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

ಅಲ್ಲದೇ, ತಮ್ಮ ಆಡಳಿತ ಅವಧಿಯಲ್ಲಿ ಸಹಕಾರ ನೀಡಿದ ಸದಸ್ಯರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಬಾಲ ಚಂದ್ರ ಜಾರಕಿಹೊಳಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಅವರು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿ ದ್ದಾರೆ. ಈ ತಿಂಗಳೊಳಗೆ ನೂತನ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಎಂದರು.

   

Related Articles

error: Content is protected !!