ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿಗಳು ಕಳೆದ ಕೆಲ ದಿನಗಳಿಂದ ರಾಜಕೀಯ ವಲಯದಲ್ಲಿ ಹರಿದಾಡುತ್ತಲೇ ಇದೆ. ಅಲ್ಲದೇ ಕೆಲವು ಬೆಳವಣಿಗೆಗಳು ಇದಕ್ಕೆ ಪುಷ್ಟಿ ಕೊಡುವಂತಿವೆ. ಇನ್ನೊಂದೆಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಭೇಟಿ ಮತ್ತಷ್ಟು ಕುತೂಹಲ ಕೆರಳಿಸಿದೆ.
ಶುಕ್ರವಾರವಷ್ಟೇ ಸಚಿವ ಸತೀಶ್ ಜಾರಕಿಹೊಳಿ ಹೊಸದಿಲ್ಲಿಗೆ ಭೇಟಿ ನೀಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹೈಕಮಾಂಡ್‌ನ ಹಲವು ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುದ್ದಿಗಳು ಬಲು ಜೋರಾಗಿದ್ದವು. ಆದರೆ, ನಾಯಕತ್ವ ಬದಲಾವಣೆ ವಿಷಯವನ್ನು ಸ್ಪಷ್ಟವಾಗಿ ನಿರಾಕರಿಸಿರುವ ಸಿಎಂ ಅವರು, ಇವೆಲ್ಲ ಗಾಳಿ ಸುದ್ದಿ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ, ಸಿಎಂ ಬದಲಾವಣೆ ಕೇವಲ ಊಹಾಪೋಹ ಎನ್ನುವ ಮೂಲಕ ಈ. ವದಂತಿಗಳಿಗೆ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ