ಚಿತ್ರದುರ್ಗ : ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತು ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಸವಕೇಂದ್ರ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಐದು ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೋಮವಾರ ಅಪರಾಹ್ನ ಮೂರೂವರೆ ಸುಮಾರಿಗೆ ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾದರೂ ಮುರುಘಾಮಠ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಶರಣರು ನೇರವಾಗಿ ದಾವಣಗೆರೆ ಶಿವಯೋಗ ಆಶ್ರಮದತ್ತ ಪ್ರಯಾಣ ಬೆಳೆಸಿದರು. ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿದ್ದ ಮುರುಘಾಶ್ರೀ 2ನೇ ಬಾರಿಗೆ ಬಿಡುಗಡೆಯಾಗುತ್ತಿದ್ದಾರೆ.