Home » ಮುಡಾ ದಿಕ್ಕು ತಪ್ಪಿಸಲು ಜಾತಿ ಗಣತಿ ವರದಿ
 

ಮುಡಾ ದಿಕ್ಕು ತಪ್ಪಿಸಲು ಜಾತಿ ಗಣತಿ ವರದಿ

ಎಚ್‌ ಡಿ ಕೆ

by Kundapur Xpress
Spread the love

ಬೆಂಗಳೂರು : ಮುಡಾ ಹಗರಣದಿಂದ ಜನತೆಯ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿ ವಿಷಯವನ್ನು ಮುನ್ನೆಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸೋಮವಾರ ಜೆ.ಪಿ.ನಗರ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡಲಾಗುತ್ತದೆ. ಈಗ ಮುಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತರಲಾಗಿದೆ ಎಂದು ವಾಗ್ದಾಳಿ ನಡೆಸಿದರು

 

Related Articles

error: Content is protected !!